worlds no 1T twenty batsman suryakumar yadav
ವಿಶ್ವದ ನಂ 1 ಟಿ ಟ್ವೆಂಟಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಸೂರ್ಯ ಅಗ್ರಸ್ಥಾನ
ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಟಿ20 ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಆಗ್ರಸ್ಥಾನ ಪಡೆದು ವಿಶ್ವದ ನಂ 1 ಟಿ- ಟ್ವೆಂಟಿ ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದ್ದಾರೆ.
ಇದೆ ಮೊದಲಬಾರಿಗೆ ಸೂರ್ಯಕುಮಾರ್ ಯಾದವ್ ಇ ಸಾಧನೆ ಮಾಡಿದ್ದು ಇದೇ ರೀತಿ ಉತ್ತಮ ಫಾರ್ಮ್ ಕಾಯ್ದುಕೊಂಡರೆ ನಂ 1ಸ್ಥಾನ ಭದ್ರವಾಗಿರಲಿದೆ.
ಸೂರ್ಯ ಕುಮಾರ್ 838 ಪಾಯಿಂಟ್ ಗಳೊಂದಿಗೆ ಪ್ರಥಮ ಸ್ಥಾನದಲ್ಲಿದ್ದಾರೆ. ಸದ್ಯ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಎರಡು ಅರ್ಧಶತಕಗಳನ್ನು ಸಿಡಿಸಿ ಉತ್ತಮ ಫಾರ್ಮ್ನಲ್ಲಿದ್ದು ಇದರೊಂದಿಗೆ ಈ ಹಿಂದೆ ಮೊದಲ ಸ್ಥಾನದಲ್ಲಿದ್ದ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅವರನ್ನು ಹಿಂದೆ ಹಾಕುವಲ್ಲಿ ಯಶಸ್ವಿಆಗಿದ್ದಾರೆ.
ಈಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 68 ರನ್ ಗಳಿಸಿದ್ದ ಸೂರ್ಯ, ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು.ಇಂದು ನಡೆದ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ 30 ರನ್ ಸಿಡಿಸಿದರು.
ಟೀಮ್ ಇಂಡಿಯಾದ ಮತ್ತೊಬ್ಬ ಆಟಗಾರ ವಿರಾಟ್ ಕೊಹ್ಲಿ ಅವರು 638 ಪಾಯಿಂಟ್ಸ್‌ಗಳೊಂದಿಗೆ 10ನೇ ಸ್ಥಾನ ಪಡೆದುಕೊಳ್ಲುವಲ್ಲಿ ಯಶಸ್ವಿಯಾಗಿದ್ದಾರೆ.ಸದ್ಯ ವಿಶ್ವಕಪ್ ಟೂರ್ನಮೆಂಟ್ನಲ್ಲಿ ಉತ್ತಮ ಫಾರ್ಮನಲ್ಲಿದ್ದು 3 ಅರ್ಧ ಶತಕ ಬಾರಿಸಿದ್ದಾರೆ
ನ್ಯೂಜಿಲೆಂಡ್ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಕೂಡ ರ‍್ಯಾಂಕಿಂಗ್ಸ್‌ನಲ್ಲಿ ಮೇಲಕ್ಕೇರಿದ್ದಾರೆ. ಶ್ರೀಲಂಕಾ ವಿರುದ್ಧ 104 ಮತ್ತು ಇಂಗ್ಲೆಂಡ್ ವಿರುದ್ಧ 62 ರನ್ ಗಳಿಸಿದ್ದ ಅವರು ಏಳನೇ ಸ್ಥಾನ ಪಡೆದಿದ್ದಾರೆ.
ಬಾಂಗ್ಲಾದೇಶ ವಿರುದ್ಧ 109 ರನ್ ಗಳಿಸಿದ್ದ ದಕ್ಷಿಣ ಆಫ್ರಿಕಾದ ಎಡಗೈ ಬ್ಯಾಟ್ಸ್ಮನ್ ರಿಲೀ ರೋಸೊ ಟಾಪ್ 10ರೊಳಗೆ ಸ್ಥಾನ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ.
Post a Comment